TSK

TSK · ಮತ್ತಾಯನು 16:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.

ಅದಕ್ಕೆ ಆತನು, ‹“ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ”› ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.

¶ ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.

ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

¶ ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.