TSK

TSK · ಮತ್ತಾಯನು 16:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

¶ ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

¶ ‹“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.›

¶ ಅದಕ್ಕೆ ಯೇಸು, ‹“‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ”› ಎಂದು ಉತ್ತರಕೊಟ್ಟನು.

ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,

ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.