TSK

TSK · ಮತ್ತಾಯನು 17:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಅಂದನು.

¶ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,

ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.

¶ ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.›

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ‹ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು› ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,