TSK

TSK · ಮತ್ತಾಯನು 18:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.›

‹ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ”› ಅಂದನು.

‹ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.›

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.

ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.