TSK

TSK · ಮತ್ತಾಯನು 18:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›

‹ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.›

ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.