TSK

TSK · ಮತ್ತಾಯನು 18:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.

¶ ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ

‹ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.›

‹ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು”› ಅಂದನು.

¶ ಯೇಸು ತನ್ನ ಶಿಷ್ಯರಿಗೆ, ‹“ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?›

“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.

ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?

¶ ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

¶ ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.

ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.

ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.

ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›

ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.