‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
TSK
TSK · ಮತ್ತಾಯನು 18:9
Treasury of Scripture Knowledge references in ಕನ್ನಡ IRV.
‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›
ಆತನು ಅವನಿಗೆ, ‹“ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.›‹ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ”› ಎಂದು ಹೇಳಿದನು.
‹ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.›
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.