TSK

TSK · ಮತ್ತಾಯನು 19:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.

ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ.