TSK

TSK · ಮತ್ತಾಯನು 2:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.

ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

ಆತನು ತಿರುಗಿ ಎರಡನೆಯ ಸಾರಿ ಅವನಿಗೆ, ‹“ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?”› ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ ‹“ನನ್ನ ಕುರಿಗಳನ್ನು ಪಾಲಿಸು”› ಎಂದು ಹೇಳಿದನು.

ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.