TSK

TSK · ಮತ್ತಾಯನು 20:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?

ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?

ಯೇಸು ಅವನಿಗೆ, ‹“ಗೆಳೆಯನೇ, ನೀನು ಯಾಕೆ ಬಂದಿರುವೇ”› ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?