ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
TSK
TSK · ಮತ್ತಾಯನು 21:10
Treasury of Scripture Knowledge references in ಕನ್ನಡ IRV.
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
¶ ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.
ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
¶ ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, ‹“ನೀನು ಹಿಂಸೆಪಡಿಸುವ ಯೇಸುವೇ ನಾನು;›