TSK

TSK · ಮತ್ತಾಯನು 21:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

¶ “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

¶ “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.

ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

¶ ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,

¶ ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.

ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.

ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.