TSK

TSK · ಮತ್ತಾಯನು 21:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?

ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?

ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.

¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›

ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.