TSK

TSK · ಮತ್ತಾಯನು 22:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.

“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.

‹ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.›

ಯೇಸು ಅವನಿಗೆ, ‹“ಗೆಳೆಯನೇ, ನೀನು ಯಾಕೆ ಬಂದಿರುವೇ”› ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.