TSK

TSK · ಮತ್ತಾಯನು 22:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,

ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’

ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.

ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.

¶ ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.