ಯೋಬನು 32:15
TSK
ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
TSK
Treasury of Scripture Knowledge references in ಕನ್ನಡ IRV.
ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, ‹“ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.›
ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, ‹“ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ”› ಎಂದು ಹೇಳಿದನು