TSK

TSK · ಮತ್ತಾಯನು 23:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.›

¶ ‹“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.›

ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.

ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.