TSK

TSK · ಮತ್ತಾಯನು 23:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.

ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?

‹ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?›

‹ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.›

ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.

¶ ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.

ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.