TSK

TSK · ಮತ್ತಾಯನು 23:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›

ಆಗ ಆತನು ಅವರಿಗೆ, ‹“ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ”› ಎಂದು ಹೇಳಿದನು.

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

¶ ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

¶ ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.

ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.