TSK

TSK · ಮತ್ತಾಯನು 23:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›

‹ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು›

‹ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು”› ಎಂದು ಹೇಳಿದನು.

ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.

¶ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,

ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.