TSK

TSK · ಮತ್ತಾಯನು 24:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.

ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

‹ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.›