ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.
TSK
TSK · ಮತ್ತಾಯನು 24:27
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
ಯೇಸು ಅವನಿಗೆ, ‹“ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.
¶ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
‹ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.›
ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.