TSK

TSK · ಮತ್ತಾಯನು 24:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

¶ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, ‹“ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು”› ಎಂದು ಉತ್ತರಕೊಟ್ಟನು.