ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
TSK
TSK · ಮತ್ತಾಯನು 24:29
Treasury of Scripture Knowledge references in ಕನ್ನಡ IRV.
¶ ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
¶ ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›
¶ ‹“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.›
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
¶ ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.