TSK

TSK · ಮತ್ತಾಯನು 24:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.

‹ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.›

¶ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

¶ ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

¶ ‹“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.›

‹ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.›

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.

ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,

ಆತನು ಅವರಿಗೆ, ‹“ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.›

ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.