ಜೆಕರ್ಯ 14:7
TSK
ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
TSK
Treasury of Scripture Knowledge references in ಕನ್ನಡ IRV.
ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
‹ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.›
¶ ‹“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.›
ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›