ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.
TSK
TSK · ಮತ್ತಾಯನು 24:39
Treasury of Scripture Knowledge references in ಕನ್ನಡ IRV.
“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
‹ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.›
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.