TSK

TSK · ಮತ್ತಾಯನು 24:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.›

¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›

‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›

‹ನೀವು›‹ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.›

ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.

¶ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,

ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.

ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.