¶ ‹“ದೇವರ ರಾಜ್ಯವು ಹೇಗೆಂದರೆ›‹ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.›
TSK
TSK · ಮತ್ತಾಯನು 25:14
Treasury of Scripture Knowledge references in ಕನ್ನಡ IRV.
¶ ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,›
¶ ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, ‹“ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.›
¶ ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
¶ ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.