TSK

TSK · ಮತ್ತಾಯನು 25:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

¶ ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, ‹“ನೀನು ಹಿಂಸೆಪಡಿಸುವ ಯೇಸುವೇ ನಾನು;›

¶ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.