TSK

TSK · ಮತ್ತಾಯನು 26:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

¶ ‹“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.›

‹ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು”› ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅದಕ್ಕೆ ಯೇಸು ಅವರಿಗೆ, ‹“ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?›

‹ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ”› ಅಂದನು.

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.

ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;