TSK

TSK · ಮತ್ತಾಯನು 26:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.

‹ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.›

ಯೇಸು ಪ್ರತ್ಯುತ್ತರವಾಗಿ, ‹“ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ”› ಅಂದನು.

ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, ‹“ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ”› ಎಂದು ಹೇಳಿದನು.