TSK

TSK · ಮತ್ತಾಯನು 26:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.›

ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.