ವಿಮೋಚನಕಾಂಡ 5:17
TSK
ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.
TSK
Treasury of Scripture Knowledge references in ಕನ್ನಡ IRV.
ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,