TSK

TSK · ಮತ್ತಾಯನು 27:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?

¶ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

¶ ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.

ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.