TSK

TSK · ಮತ್ತಾಯನು 27:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.

ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.