¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
TSK
TSK · ಮತ್ತಾಯನು 27:54
Treasury of Scripture Knowledge references in ಕನ್ನಡ IRV.
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
¶ ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.
¶ ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
¶ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
¶ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
¶ ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.