TSK

TSK · ಮತ್ತಾಯನು 28:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.

ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

¶ ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.

ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.

ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.

¶ ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, ‹“ನಿಮಗೆ›‹ಸಮಾಧಾನವಾಗಲಿ”› ಎಂದನು.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

¶ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.