ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
TSK
TSK · ಮತ್ತಾಯನು 3:17
Treasury of Scripture Knowledge references in ಕನ್ನಡ IRV.
ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
‹ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ”› ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.