TSK

TSK · ಮತ್ತಾಯನು 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.

ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.

ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.

ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.

¶ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

‹ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ”› ಅಂದನು.

¶ ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.

¶ ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

¶ ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?

ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›

¶ ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,

ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,

¶ ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.

ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.