ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
TSK
TSK · ಮತ್ತಾಯನು 4:1
Treasury of Scripture Knowledge references in ಕನ್ನಡ IRV.
¶ ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.
¶ ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.