TSK

TSK · ಮತ್ತಾಯನು 4:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.

ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.

ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

‹ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?”› ಎಂದು ಹೇಳಿದನು.

‹ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು”› ಎಂದು ಹೇಳಿದನು.

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.