ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
TSK
TSK · ಮತ್ತಾಯನು 5:17
Treasury of Scripture Knowledge references in ಕನ್ನಡ IRV.
ಯೇಸು ಪ್ರತ್ಯುತ್ತರವಾಗಿ ಅವನಿಗೆ, ‹“ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” › ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
‹ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.›
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.