ವಿಮೋಚನಕಾಂಡ 20:7
TSK
ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
TSK
Treasury of Scripture Knowledge references in ಕನ್ನಡ IRV.
ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
¶ ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
¶ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
¶ ‹“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.›