TSK

TSK · ಮತ್ತಾಯನು 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.

ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.

ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”

¶ ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.

¶ ‹“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.›

‹ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ› ‹ನಮ್ಮ ಪಾಪಗಳನ್ನು ಕ್ಷಮಿಸು.› ‹ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ”› ಅಂದನು.

¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.