ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?
TSK
TSK · ಮತ್ತಾಯನು 6:2
Treasury of Scripture Knowledge references in ಕನ್ನಡ IRV.
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
¶ ‹“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.›
‹ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?›
‹ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;›
‹ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.›
‹ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.›
‹ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.›
¶ ‹“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.›
‹ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?›
‹“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.›
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
¶ “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
¶ ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.