ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
TSK
TSK · ಮತ್ತಾಯನು 6:24
Treasury of Scripture Knowledge references in ಕನ್ನಡ IRV.
ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
¶ ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
¶ ‹“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.›
‹ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ”› ಅಂದನು.
¶ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.