TSK

TSK · ಮತ್ತಾಯನು 6:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.

‹ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ›‹ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?›

‹ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.›

‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›

¶ ‹“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,›

ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.

¶ ‹“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.›

¶ ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ‹“ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.›

ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.

ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.