TSK

TSK · ಮತ್ತಾಯನು 6:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.

ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು

ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.

ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.

ಅಂದಿನಿಂದ ಯೇಸು, ‹“ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು”› ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

¶ ‹“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.›

ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,›

‹ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.›

ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.

ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.

ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,