TSK

TSK · ಮತ್ತಾಯನು 6:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು

¶ ‹“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›

‹ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ”› ಅಂದನು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

¶ ಆತನು ಉಪದೇಶಮಾಡಿ ಹೇಳಿದ್ದೇನಂದರೆ, ‹“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,›

¶ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, ‹“ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.›

ಅದೇನೆಂದರೆ, ‹“ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.›

‹ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು”› ಅಂದನು.

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.